ಜನವರಿ 10ರಂದು “ನರಿಂಗಾನ ಕಂಬಳೋತ್ಸವ”-2026 : ವಿಧಾನ ಸಭೆಯ ಸ್ವೀಕರ್ ಹಾಗೂ ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷರಾದ ಯು ಟಿ ಖಾದರ್

ಮಂಗಳೂರು:ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಾಲ್ಕನೇ ವರ್ಷದ ಹೊನಲು‌ ಬೆಳಕಿನ ಲವಕುಶ ಜೋಡುಕರೆ “ನರಿಂಗಾನ ಕಂಬಳೋತ್ಸವ”-2026 ಜನವರಿ 10ರಂದು ಶನಿವಾರ ಬೆಳಗ್ಗೆ 9.00ರಿಂದ ನಡೆಯಲಿದೆ ಎಂದು ವಿಧಾನ ಸಭೆಯ ಸ್ವೀಕರ್ ಹಾಗೂ ನರಿಂಗಾನ ಕಂಬಳೋತ್ಸವ ಸಮಿತಿಯ ಅಧ್ಯಕ್ಷರಾದ ಯು ಟಿ ಖಾದರ್ ತಿಳಿಸಿದರು.

ಅವರು ಸರ್ಕ್ಯೂಟ್ ಹೌಸ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಒಡಿಯೂರುವ ಶ್ರೀ ಗುರುದೇವದತ್ತ ಸಂಸ್ಥಾನಂನ
ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದು ,ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ . ಎಮ್. ಮೋಹನ್ ಆಳ್ವ ದೀಪ ಬೆಳಗಿಸುವರು.ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸುವರು.ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿ ವೇ. ಮೂ. ವರ್ಕಾಡಿ ಹೊಸಮನೆ ರಾಜೇಶ್ ತಾಳಿತ್ತಾಯರು,ಮಂಗಳೂರು ಧರ್ಮಪ್ರಾಂತ್ಯ,ಧರ್ಮಾಧ್ಯಕ್ಷ ರೆ. ಫಾ. ಡಾ. ಪೀಟರ್ ಪಾವುಲ್ ಸಲ್ದಾನ,ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್‌ಕುಮಾರ್ ರೆಡ್ಡಿ,ದ.ಕ. ಜಿಲ್ಲಾ ಪಂಚಾಯತ್
ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ,ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ. ಪಿ.ಎಲ್. ಧರ್ಮ,ಧಾರವಾಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎ.ಎಮ್. ಖಾನ್,ಮಂಜನಾಡಿ ಕೇಂದ್ರ ಜುಮಾ ಮಸ್ಟಿದ್ ಅಧ್ಯಕ್ಷ ಶ್ರೀ ಅಬ್ದುಲ್ ಅಝೀಝ್ ಮೈಸೂರು ಬಾವ,
ಜಿಲ್ಲಾ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಗುಣಪಾಲ ಕಡಂಬ ಸೇರಿದಂತೆ ಅನೇಕ ಗಣ್ಯರು, ವಿವಿಧ ಕ್ಷೇತ್ರಗಳ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಸಂಜೆ ನಡೆಯುವದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಡಿಕೆ ಶಿವಕುಮಾರ್ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನಸಭಾಧ್ಯಕ್ಷನಾಗಿರುವ ನಾನು ಕಂಬಳ ಸಮಿತಿ ಅಧ್ಯಕ್ಷ ಮೇಲೆ ಸಭಾಧ್ಯಕ್ಷನಾಗಿರುವ ನಾನು ಅಧ್ಯಕ್ಷನ ನೆಲೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದೇನೆ. ಹಾಗೆಯೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಎಚ್ ಕೆ ಪಾಟೀಲ್, ಕಾರ್ಮಿಕ ಸಚಿವರಾಗಿರುವ ಸಂತೋಷ್ ಲಾಡ್, ವಕ್ ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಷ್ ಚೌಟ, ಕಾಸರಗೋಡು ಸಂಸದ ರಾಜು ಮೋಹನ್ ಉನ್ನಿತ್ತನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾಕ್ಟರ್ ಎಂ. ಎನ್. ರಾಜೇಂದ್ರ ಕುಮಾರ್, ಬಂಜಾರ ಗ್ರೂಫ್ ಆಫ್ ಹೊಟೇಲ್ಸ್ ಆಡಳಿತ ನಿರ್ದೇಶಕ ಡಾಕ್ಟರ್ ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಡಾ. ರೊನಾಲ್ಡ್ ಕೊಲಸೋ, ಅದಾನಿ ಗ್ರೂಪಿನ ಪ್ರೆಸಿಡೆಂಟ್ ಮತ್ತು ಎಕ್ಸಿಕ್ಯೂಟಿವ್ ಡೈರೆಕ್ಟರ್ ಕಿಶೋರ್ ಕುಮಾರ್ ಆಳ್ವ ನ್ಯಾಷನಲ್ ಕಮಿಷನ್ ಫಾರ್ ಎಲೈಡ್ ಅಂಡ್ ಹೆಲ್ತ್ ಕೇರ್ ಪ್ರೊಫೆಶನ್ಸ್ ಕರ್ನಾಟಕ ಚೇರ್ಮನ್ ಡಾಕ್ಟರ್ ಯು. ಟಿ. ಇಫ್ತಿಕರ್ ಅಲಿ, ಜಿಲ್ಲೆಯ ಶಾಸಕರು ವಿಧಾನಪರಿಷ ಸದಸ್ಯರು ಮಾಜಿ ಸಚಿವರು, ಮಾಜಿ ಶಾಸಕರುಗಳು ವಿವಿಧ ನಿಗಮ ಮಂಡಳಿ ಅಧ್ಯಕ್ಷರು ಉಜ್ಜಮಿಗಳು ಯುನಿವರ್ಸಿಟಿಗಳ ಕುಲಾಧಿಪತಿಗಳು ಧಾರ್ಮಿಕ ಪರಿಷತ್ ಸದಸ್ಯರು ವಿವಿಧ ಪಕ್ಷಗಳ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಕಂಬಳ ಸಮಿತಿ ಜಿಲ್ಲಾಧ್ಯಕ್ಷ ಡಾಕ್ಟರ್ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕಾರಿಯ ಜೋಕಟ್ಟೆ, ಸಹಕಾರ ರತ್ನ ಪುರಸ್ಕೃತ ಟಿ. ಜಿ. ರಾಜಾರಾಮ್ ಭಟ್, ಭಾಸ್ಕರ್ ಕೋಟ್ಯಾನ್ ಹಾಗೂ ಬಾರ್ಕೂರು ಶಾಂತಾರಾಮ್ ಶೆಟ್ಟಿ, ಕರ್ನಾಟಕ ಕ್ರೀಡಾ ರತ್ನ ಭಾಸ್ಕರ್ ದೇವಾಡಿಗ, ವಿಶ್ವಕಪ್ ವಿಜೇತ ಭಾರತದ ತಂಡದಾಟಗಾರ್ತಿ ಧನಲಕ್ಷ್ಮಿ ಪೂಜಾರಿ ಕಾರ್ಕಳ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ ಪಂಪದ ಚಿಪ್ಪಾರು, ಪ್ರತಿಭಾನ್ವಿತ ವಿದ್ಯಾರ್ಥಿನಿ ಅಪೇಕ್ಷ ಪುಂಡಿಕಾಯಿ ಅವರನ್ನ ಸಾರ್ವಜನಿಕವಾಗಿ ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ವಿಶೇಷ ಸಾಗುವಾನಿತರಾಗಿ ಸ್ಯಾಂಡಲ್ವುಡ್ ನಟ ರಿಷಬ್ ಶೆಟ್ಟಿ, ತುಳು ರಂಗಭೂಮಿಯಲ್ಲಿ ಮಿಂಚಿರುವ ರೂಪೇಶ್ ಶೆಟ್ಟಿ, ಅರವಿಂದ ಬೋಳಾರ್, ದೇವದಾಸ್ ಕಾಫಿಕಾಡ್, ಭೋಜರಾಜ್ ವಾಮಂಜೂರು, ಪ್ರದೀಪ್ ಆಳ್ವ ಕದ್ರಿ , ಮಂಜು ಎಂ ರೈ ಭಾಗವಹಿಸಲಿಕ್ಕಿದ್ದಾರೆ.

ವಿಶೇಷವೆಂದರೆ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ ಕೋಣಗಳ ಯಜಮಾನರುಗಳಿಗೆ ಬೆಳ್ಳಿಯ ಪದಕ ಹಾಗೂ ಟ್ರೋಫಿ ಕೊಟ್ಟು ಗೌರವಿಸಲಾಗುವುದು.
ಸಮಾರೋಪದಲ್ಲಿ ಬಹಳಷ್ಟು ಗಣ್ಯರು ಭಾಗವಹಿಸುವರು.
ಜನವರಿ 12ರಂದು ಸೋಮವಾರ ನರಿಗಾನ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನರಿಂಗಾನ ಗ್ರಾಮೋತ್ಸವ ಎಂಬ ವಿಶೇಷ ಸ್ನೇಹ ಸಮ್ಮಿಲನ ಪ್ರತಿಭಾ ಪುರಸ್ಕಾರ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ನೃತ್ಯವೇ ವಿದ್ಯಾ ಸಂಗೀತ ರಸಮಂಜರಿ ಕ್ರೀಡಾಕೂಟಗಳು ಪುರುಷರಿಗೆ ಮತ್ತು ಮಹಿಳೆಯರಿಗೆ ನಡೆಯಲಿಕ್ಕಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸುವರು.

ಪತ್ರಿಕಾಗೋಷ್ಟಿಯಲ್ಲಿ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಕಣಚೂರು ಸಮೂಹ ಸಂಸ್ಥೆಯ ಚೇರ್ ಮೆನ್ ಯು. ಕೆ. ಮೋನು, ಉಪಾಧ್ಯಕ್ಷ ಮ್ಯಾಕ್ಸಿಯಂ ಡಿಸೋಜ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!