ಪಲ್ಟಿಯಾಗಿ ಹೊತ್ತಿ ಉರಿದ ಕಾರು – ಇಬ್ಬರು ಸಜೀವ ದಹನ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ನಲ್ಲೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿ ಹೊತ್ತು ಮರಕ್ಕೆ ಡಿಕ್ಕಿ ಹೊಡೆದು ಕಂದಕದಲ್ಲಿ ಬಿದ್ದಿದೆ. ಪರಿಣಾಮವಾಗಿ ಕಾರು ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಇಬ್ಬರು ಸವಾರರು ಸಜೀವ ದಹನಗೊಂಡಿದ್ದಾರೆ.

ಘಟನೆಯಲ್ಲಿ ಕಾರಿನ ನಂಬರ್ಪ್ಲೇಟ್ ಕೂಡ ಬೆಂಕಿಯಲ್ಲಿ ಸುಟ್ಟುಹೋಗಿದ್ದು, ಇದೇ ಕಾರಣದಿಂದ ಕಾರು ಮತ್ತು ಅದರ ಸವಾರರ ಗುರುತು ಪತ್ತೆ ಹಚ್ಚಲು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.ಪ್ರಾಥಮಿಕ ತನಿಖೆಗೋಸ್ಕರ, ಮೃತರು ಸಿದ್ದಾಪುರ ಮೂಲದವರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ. ಘಟನಾ ಸ್ಥಳದಲ್ಲಿ ಹೊನ್ನಾವರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!