ಜ. 31ರಂದು ಪ್ರೊಆ್ಯಮ್ ಗಾಲ್ಫ್ ಟೂರ್ನಮೆಂಟ್ ಗೆ ಮಂಗಳೂರು ನಗರ ಸಾಕ್ಷಿ … !

ಮಂಗಳೂರು:ಪ್ಲಡ್ ಲೈಟಿಂಗ್ ವ್ಯವಸ್ಥೆಯೊಂದಿಗೆ 18 ಹೋಲ್‌ಗಳೊಂದಿಗೆ ವಿಶ್ವದರ್ಜೆಯ ಗಾಲ್ಫ್ ಕೋರ್ಸ್ ಆಗಿ ಪರಿತರ್ವನೆಗೊಂಡಿರುವ ಪಿಲಿಕುಳದ ಗಾಲ್ಫ್ ಕೋರ್ಸ್‌ನಲ್ಲಿ ಜ. 31ರಂದು ಪ್ರೊಆ್ಯಮ್ (ಪ್ರೊಫೆಶನಲ್ ಅಮೆಚೂ‌ರ್) ಗಾಲ್ಫ್ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ಪಿಲಿಕುಳ ಗಾಲ್ಫ್ ಕ್ಲಬ್‌ನ ಕ್ಯಾಪ್ಟನ್ ಮನೋಜ್ ಶೆಟ್ಟಿ ತಿಳಿಸಿದರು .

ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವಿಶ್ವಮಟ್ಟದ ಕೋರ್ಸ್ ಸಿದ್ಧತೆ ಮತ್ತು ಅತ್ಯಾಧುನಿಕ ಬೆಳಕಿನ ವ್ಯವಸ್ಥೆಯೊಂದಿಗೆ ಪಿಲಿಕುಳ ಗಾಲ್ಫ್ ಕ್ಲಬ್‌ಭಾರತೀಯ ಗಾಲ್ಫ್ ಕ್ರೀಡೆಯಲ್ಲಿ ನವೀನತೆ ಮತ್ತು ಸ್ಪರ್ಧಾತ್ಮಕ ಶ್ರೇಷ್ಟತೆಯನ್ನು ಒಟ್ಟುಗೂಡಿಸಿ ಹೊಸ ಅಧ್ಯಾಯ ಆರಂಭಿಸಲಿದೆ ಎಂದರು.

ಪಿಲಿಕುಳ ಗಾಲ್ಫ್ ಕ್ಲಬ್ ಆತಿಥ್ಯದಲ್ಲಿ ನಡೆಯಲಿರುವ ಈ ಹೊನಲು ಬೆಳಕಿನ ಪಂದ್ಯಾಟದಲ್ಲಿ ವೃತ್ತಿಪರ ಗಾಲ್ನರ್‌ಗಳು ಹಾಗೂ ಅಮೆಚೂ‌ರ್ ಆಟಗಾರರು ಒಂದೇ ವೇದಿಕೆಯಲ್ಲಿ ಸ್ಪರ್ಧಿಸಲಿದ್ದಾರೆ. ಈಗಾಗಲೇ ಭಾರತದ 12 ವೃತ್ತಿಪರ ಗಾಲ್ನರ್‌ಗಳು ತಮ್ಮ ಭಾಗವಹಿಸುವಿಕೆಯನ್ನು ಖಚಿತ ಪಡಿಸಿದ್ದಾರೆ . ಸ್ಪರ್ಧೆಯನ್ನು ಮೀರಿ ಈ ಟೂರ್ನಮೆಂಟ್ ಕರಾವಳಿ ಕರ್ನಾಟಕದಲ್ಲಿ ಗಾಲ್ಫ್ ಕ್ರೀಡೆಯ ಬೆಳವಣಿಗೆಗೆ ಪಿಲಿಕುಳ ಗಾಲ್ಫ್ ಕ್ವಬ್‌ನ ಬದ್ಧತೆಯನ್ನು ಪ್ರದರ್ಶಿಸುತ್ತಿದೆ. ಮಂಗಳೂರನ್ನು ಪ್ರಗತಿಶೀಲ ಕ್ರೀಡಾ ತಾಣವಾಗಿ ಉತ್ತೇಜಿಸುತ್ತದೆ ಎಂದು ಅವರು ಹೇಳಿದರು.

ಪಿಲಿಕುಳದಲ್ಲಿ ನವೀಕೃತಗೊಂಡಿರುವ ಗಾಲ್ಫ್ ಕೋರ್ಸ್‌ನ ಉದ್ಘಾಟನೆ ಜ.9ರಂದು ನಿಗದಿಯಾಗಿತ್ತು. ಇದೀಗ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಜ.10ರಂದು ಮಂಗಳೂರಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಅವರಿಂದ ಉದ್ಘಾಟನೆಗೆ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಮನೋಜ್ ಶೆಟ್ಟಿ ಸ್ಪಷ್ಟನೆ ನೀಡಿದರು .

ಪತ್ರಿಕಾಗೋಷ್ಟಿಯಲ್ಲಿ ಕ್ರೀಡಾಕೂಟದ ಆಯೋಜಕರಾದ ಗಿರೀಶ್ ರಾವ್, ನಿತಿನ್ ಶೆಟ್ಟಿ, ಗೌತಮ್ ಪಡಿವಾಳ, ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!