ಮಂಗಳೂರು :ಸುಳ್ಯ ಶಾಸಕಿ ವಿರುದ್ದ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ವಿಷಯಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಛಾ ಈ ಬಗ್ಗೆ ಎಸ್ಪಿ ಡಾ.ಅರುಣ್ ಅವರಿಗೆ ದೂರು ನೀಡಿದೆ.
ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಯುವಕನೋರ್ವನ ಹೆಸರಿನಲ್ಲಿ ಶ್ರದ್ಧಾಂಜಲಿ ಪೋಸ್ಟ್ ಮಾಡಲಾಗಿತ್ತು. ‘ಬಿಲ್ಲವ ಸಂದೇಶ್’ ಎಂಬ ಫೇಸ್ ಬುಕ್ ಖಾತೆಯಲ್ಲಿ ಮಾಡಲಾದ ಪೋಸ್ಟ್ ನಲ್ಲಿ ‘ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಇವರು ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೆ ಇಂದು ಎಲ್ಲರನ್ನೂ ಅಗಲಿ ತೆರಳಿದ್ದಾರೆ’ ಎಂದು ಹೇಳಲಾಗಿತ್ತು.
‘ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಬ್ಲೂಜೆಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದೂ ಹೇಳುತ್ತಾ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ’ ಎಂದು ಪೋಸ್ಟ್ ನಲ್ಲಿ ಬರೆಯಲಾಗಿತ್ತು.ಪೋಸ್ಟ್ ವೈರಲ್ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.
ಸಂದೇಶ್ ಎಂಬಾತನನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದರು.