ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಜ.24 ರಂದು ಲೋಕಾರ್ಪಣೆ … !

ಮಂಗಳೂರು:ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಇಂದು ಹೊಸ ಕಾಂತಿಯೊಂದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ 9 ವರ್ಷಗಳ ದೀರ್ಘ ನಿರೀಕ್ಷೆಗೆ ತೆರೆ ಎಳೆದಂತೆ, ವೃತ್ತ ಪುನರ್ನಿಮರ್ಾಣಗೊಂಡಿದ್ದು, ಕರಾವಳಿಯ ಸಾಂಸ್ಕೃತಿಕ ವೈಶಿಷ್ಟ್ಯಕ್ಕೆ ನವ ಚೈತನ್ಯವನ್ನು ತುಂಬಿದೆ. ಬಹುನಿರೀಕ್ಷಿತ ನವೀಕೃತ ಮಹಾವೀರ ವೃತ್ತದ ಲೋಕಾರ್ಪಣೆ ಜ.24 ರಂದು ಸಂಜೆ 5:30ಕ್ಕೆ ನೆರವೇರಲಿದೆ ಎಂದು ಮಂಗಳೂರು ಜೈನ್ ಸೊಸೈಟಿಯ ಅಧ್ಯಕ್ಷ ಪುಷ್ಪರಾಜ್ ಜೈನ್ ಹೇಳಿದರು.

ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಜೈನ ಸೊಸೈಟಿ (ರಿ) ಅವರ ಮುಂದಾಳತ್ವದಲ್ಲಿ ರೂಪುಗೊಂಡ ಈ ಅಭಿವೃದ್ಧಿ ಕಾರ್ಯಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಲೋಕಾರ್ಪಣೆ ನೆರವೇರಿಸಲಿದ್ದು, ದಕ್ಷಿಣಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ರಾಜೇಂದ್ರಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಸಭಾಧ್ಯಕ್ಷ ಡಾ. ಯು.ಟಿ. ಖಾದರ್ ಅವರು ನಾಮಫಲಕ ಅನಾವರಣಗೊಳಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ, ಬ್ರಿಜೇಶ್‌ ಚೌಟ, ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೂಡಾ ಮಾಜಿ ಅಧ್ಯಕ್ಷ ಕೆ. ಸುರೇಶ್ ಬಲ್ಲಾಳ್ ಹಾಗೂ ಮಾಜಿ ಕಾರ್ಪೊರೇಟರ್ ಸಂದೀಪ್ ಗರೋಡಿ ಭಾಗವಹಿಸಲಿದ್ದಾರೆ ಎಂದರು .

ಮಹಾವೀರ ವೃತ್ತವನ್ನು ಮತ್ತಷ್ಟು ಅಂದಗೊಳಿಸಿ ಕಲಶಕ್ಕೆ ಕಳೆಯನ್ನು ತರುವಲ್ಲಿ ಮಂಗಳೂರು ಜೈನ ಸೊಸೈಟಿ ಹಾಗೂ ಜೈನ ಸಮುದಾಯದ ಅವಿರತ ಶ್ರಮ ಮಹತ್ತರವಾಗಿದೆ. ಪಂಪ್‌ವೆಲ್ ಮೇಲ್ಸ್ತುವೆ ವಿನ್ಯಾಸ ಪೂರ್ಣಗೊಂಡಿದ್ದರೂ, ವೃತ್ತ ನಿರ್ಮಾಣಕ್ಕೆ ಅನುಮತಿ ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಜೈನ ಸೊಸೈಟಿ ಹಾಗೂ ಸಮುದಾಯದ ಪ್ರಮುಖರು ಜಿಲ್ಲಾಡಳಿತ ಮತ್ತು ಪಾಲಿಕೆಯನ್ನು ಸತತವಾಗಿ ಸಂಪರ್ಕಿಸಿ,ಸೂಚಿಸಲಾದ ಮಾರ್ಗಸೂಚಿಗಳಂತೆ ವೃತ್ತದ ನಿರ್ಮಾಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ವೃತ್ತಕ್ಕೆ ಅಲಂಕಾರಿಕ ದೀಪಗಳು ಹಾಗೂ ಗ್ರಾನೈಟ್ ಅಳವಡಿಕೆ ಕಾರ್ಯಗಳು ಮುಗಿದಿದೆ ಎಂದರು .

ಪತ್ರಿಕಾಗೋಷ್ಠಿಯಲ್ಲಿ ಜೈನ್ ಸೊಸೈಟಿಯ ಕಾರ್ಯದರ್ಶಿ ಸಚಿನ್ ಕುಮಾರ್ ಜೈನ್, ಕೋಶಾಧಿಕಾರಿ ಕೆ. ವಿಜೇಶ್ ವಿದ್ಯಾಧರ್, ವೃತ್ತದ ಆರ್ಕಿಟಿಕ್ಸ್ ರಾಜ್ ಶೇಖರ್ ಬಲ್ಲಾಳ್, ಮಾಜಿ ಕಾರ್ಪೋರೇಟರ್ ಪ್ರಭಾಮಾಲಿನಿ ಜೈನ್‌, ಪ್ರಮೋದ್ ಕುಮಾರ್, ಸನತ್ ಕುಮಾರ್ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!