ಬೆಂಗಳೂರು : ತಡರಾತ್ರಿ ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ.
ನಿನ್ನೆ ತಡರಾತ್ರಿ ನಟ ಮಯೂರ್ ಪಟೇಲ್ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಚಲಾಯಿಸಿ ರಸ್ತೆ ಬದಿಯಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಈ ಸರಣಿ ಅಪಘಾತ ನಡೆದಿದೆ. ಮಯೂರ್ ಪಟೇಲ್ ವಿಪರೀತ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಅಭಿಷೇಕ್, ಶ್ರೀನಿವಾಸ್ ಎಂಬುವರ ಕಾರುಗಳಿಗೆ ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಆಗ ಅಲ್ಲೇ ಇದ್ದವರು ಕಂಟ್ರೋಲ್ ರೂಮ್ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ನಟ ಮಯೂರ್ ಪಟೇಲರನ್ನು ಠಾಣೆಗೆ ಕರೆದೊಯ್ದಿದ್ದಾರೆ.