ಅನಂತಪುರ ಕೈಗಾರಿಕಾ ಪ್ರದೇಶದ ಪ್ರೈವುಡ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ

ಮಂಜೇಶ್ವರ: ಅನಂತಪುರ ಕೈಗಾರಿಕಾ ಪ್ರದೇಶದಲ್ಲಿರುವ ಮಾರ್ಕ್ ವುಡ್ ಪ್ರೈವುಡ್ ಕಾರ್ಖಾನೆಯಲ್ಲಿ ಇಂದು ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪೇರಾಲ್ ಕಣ್ಣೂರಿನ ಅಬ್ದುಲ್ ರಹಿಮಾನ್ ಅವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಬೆಳಗಿನ ಜಾವ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.

ಘಟನೆಗೆ ಮುನ್ನ ನಿನ್ನೆ ರಾತ್ರಿ ಸುಮಾರು 12 ಗಂಟೆಯವರೆಗೆ ಕಾರ್ಖಾನೆಯಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸಿ ಬಳಿಕ ಮನೆಗೆ ತೆರಳಿದ್ದರು. ಬೆಂಕಿಯ ತೀವ್ರತೆ ಹೆಚ್ಚಿದ ಹಿನ್ನೆಲೆ ಕಾಸರಗೋಡು, ಉಪ್ಪಳ, ಕಾಞಂಗಾಡು ಸೇರಿದಂತೆ ವಿವಿಧ ಕಡೆಗಳಿಂದ ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಅಗ್ನಿ ಶಮನ ಕಾರ್ಯದಲ್ಲಿ ತೊಡಗಿವೆ.ಘಟನೆಯಿಂದ ಉಂಟಾದ ನಷ್ಟದ ಪ್ರಮಾಣವನ್ನು ಇನ್ನಷ್ಟೇ ಲೆಕ್ಕಹಾಕಬೇಕಿದ್ದು, ಅಗ್ನಿ ಅವಘಡದ ಕಾರಣದ ಕುರಿತು ತನಿಖೆ ಮುಂದುವರಿದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!