ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಇಲಾಖೆ ಮಂಗಳೂರು ಹಾಗೂ ದಿ ಭಾರತ್ ಸೈಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತ ಆಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ–2026ರ ಅಂಗವಾಗಿ ಇಂದು ರಸ್ತೆ ಸುರಕ್ಷತಾ ಜಾಥಾ ಕಾರ್ಯಕ್ರಮವು ನಗರದ ಪುರಭವನದಿಂದ ಸ್ಟೇಟ್ ಬ್ಯಾಂಕ್ ವರೆಗೆ ಜಾಥಾ ನಡೆಯಿತು.
ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಮಂಗಳೂರು ನಗರ ಪೊಲೀಸ್ ಸಂಚಾರಿ ವಿಭಾಗದ ಎಸಿಪಿ ನಜ್ಞಾ ಫಾರೂಕಿ , , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳಾದ ಜೈಬುನ್ನೀಸಾ ಜಾಥಾಕೆ ಹಸಿರು ನಿನಾಶೆಯನ್ನು ತೋರಿಸಿದರು ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ವಯಂಸೇವಕರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.