ಮಧೂರು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜ್ಞಾನಿ ಶ್ಯಾನುಭೋಗ ಅವರಿಗೆ ಸನ್ಮಾನ

ಮಧೂರು: ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜ್ಞಾನಿ ಶ್ಯಾನುಭೋಗ್ ಅವರಿಗೆ ಮಧೂರು ಸಮೀಪದ ಬೈನಡ್ಕದ ಯುವ ಶಕ್ತಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೈನಡ್ಕದಲ್ಲಿರುವ ಯುವ ಶಕ್ತಿ ಕ್ಲಬ್ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಯುವ ಶಕ್ತಿ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀ ಚಂದ್ರ ಪಾಟಾಳಿ, ಗೌರವ ಅಧ್ಯಕ್ಷರಾದ ಶ್ರೀ ರಾಜೇಶ್ ಹೊಳ್ಳ, ಸಂಯೋಜಕರಾದ ಶ್ರೀ ಅಖಿಲೇಶ್, ಕೋಶಾಧಿಕಾರಿ ಶ್ರೀ ವೆಂಕಪ್ಪ ನಾಯ್ಕ್ ಸೇರಿದಂತೆ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು.

ಸನ್ಮಾನ ಕಾರ್ಯಕ್ರಮವನ್ನು ಕ್ಲಬ್ ಅಧ್ಯಕ್ಷರಾದ ಶ್ರೀ ಚಂದ್ರ ಪಾಟಾಳಿ ಸ್ವಾಗತಿಸಿ ಮಾತನಾಡಿ, ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅಧ್ಯಕ್ಷರ ಕಾರ್ಯವನ್ನು ಶ್ಲಾಘಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಶ್ರೀ ಬಾಲಚಂದ್ರ ವಂದನಾರ್ಪಣೆ ಸಲ್ಲಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!