ಫೆ.12ರಂದು ಅಖಿಲ ಭಾರತ ಮಹಾಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ : ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವುದರ ವಿರುದ್ಧ ಕಾರ್ಮಿಕ ವಿರೋಧಿ ಕಾರ್ಪೊರೇಟ್ ಪರ 4 ಕಾರ್ಮಿಕ ಸಂಹಿತೆಗಳ ವಿರುದ್ಧ ರೈತ ವಿರೋಧಿ ಬೀಜ ಮಸೂದೆ, ವಿದ್ಯುತ್ ಮಸೂದೆ ವಿರುದ್ಧ ಹಾಗೂ ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಕಾರ್ಮಿಕರ ನೇತೃತ್ವದಲ್ಲಿ ಫೆ.12ರಂದು ಅಖಿಲ ಭಾರತ ಮಹಾಮುಷ್ಕರ ನಡೆಯಲಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಬಾಧ್ಯತೆಗಳನ್ನು ನಾಶ ಮಾಡಲು ಕಾರ್ಮಿಕ ಚಳುವಳಿಯನ್ನು ಹತ್ತಿಕ್ಕಲು ಹಾಗೂ ಬಂಡವಾಳಿಗರ ಲಾಭದ ಹಿತಾ ಸಕ್ತಿಗಳನ್ನು ಕಾಪಾಡಲು ಪ್ರಮುಖ 29 ಕಾನೂನುಗಳನ್ನು ರದ್ದುಗೊಳಿಸಿದೆ. ಉದ್ಯಮಸ್ನೇಹಿ ಹೆಸರಿನಲ್ಲಿ 4 ಕಾರ್ಮಿಕ ಸಂಹಿತೆಗಳಾದ ವೇತನ ಸಂಹಿತೆ, ಕೈಗಾರಿಕಾ ಸಂಬಂಧ ಸಂಹಿತೆ, ಉದ್ಯೋಗ ಭದ್ರತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿ ಸಂಹಿತೆ ಹಾಗೂ ಸಾಮಾಜಿಕ ಭದ್ರತಾ ಸಂಹಿತೆಗಳನ್ನು ಕಳೆದ ನವೆಂಬರ್ 21ರಿಂದ ಜಾರಿಗೊಳಿಸಲು ಅಧಿಸೂಚನೆ ಹೊರಡಿಸಿದೆ. ಸ್ವಾತಂತ್ರ್ಯದ ಬಳಿಕ ಕಾರ್ಮಿಕರು ನಡೆಸಿದ ದೀರ್ಘ ಹೋರಾಟದ ಫಲವಾಗಿ ಕನಿಷ್ಠ ವೇತನ, ಕೆಲಸದ ಸಮಯದ ಮಿತಿ, ಸಂಘಟನೆ ಮತ್ತು ಮುಷ್ಕರದ ಹಕ್ಕು ಸಾಮಾಜಿಕ ಭದ್ರತೆ ಕಾನೂನುಗಳು ಬಂದಿತ್ತು. ಆದರೆ ಈ ಎಲ್ಲಾ ಹಕ್ಕುಗಳನ್ನು ಹಿಂಪಡೆಯುವ ಪ್ರಯತ್ನವು 4 ಕಾರ್ಮಿಕ ಸಂಹಿತೆಗಳಾಗಿವೆ ಎಂದರು.

ಉದ್ಯಮಸ್ನೇಹಿ ಹೆಸರಿನಲ್ಲಿ 4 ಕಾರ್ಮಿಕ ಸಂಹಿತೆಗಳಾದ ವೇತನ ಸಂಹಿತೆ, ಕೈಗಾರಿಕಾ ಸಂಬಂಧ ಸಂಹಿತೆ, ಉದ್ಯೋಗ ಭದ್ರತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿ ಸಂಹಿತೆ ಹಾಗೂ ಸಾಮಾಜಿಕ ಭದ್ರತಾ ಸಂಹಿತೆಗಳನ್ನು 2025 ನವೆಂಬರ್ 21ರಿಂದ ಜ್ಯಾರಿಗೆ ಅಧಿಸೂಚನೆ ಹೊರಡಿಸಿದೆ. ಸ್ವಾತಂತ್ರ?ಯ ನಂತರ ಕಾರ್ಮಿಕರು ನಡೆಸಿದ ದೀರ್ಘ ಹೋರಾಟದ ಫಲವಾಗಿ ಕನಿಷ್ಠ ವೇತನ, ಕೆಲಸದ ಸಮಯದ ಮಿತಿ, ಸಂಘಟನೆ ಮತ್ತು ಮುಷ್ಕರದ ಹಕ್ಕು, ಸಾಮಾಜಿಕ ಭದ್ರತೆ ಕಾನೂನುಗಳು ಬಂದಿದ್ದು, ಆದರೆ ಈ ಎಲ್ಲಾ ಹಕ್ಕುಗಳನ್ನು ಹಿಂಪಡೆಯುವ ಪ್ರಯತ್ನವೇ ಈ 4 ಕಾರ್ಮಿಕ ಸಂಹಿತೆಗಳಾಗಿವೆ ಎಂದರು .

ಜಿಲ್ಲಾದ್ಯಂತ ವಾಹನ ಪ್ರಚಾರ ಜಾಥಾ:

ಅಖಿಲ ಭಾರತ ಮಹಾಮುಷ್ಕರದ ಸಂದೇಶವನ್ನು ಜನಸಾಮಾನ್ಯರ ಮಧ್ಯೆ ಕೊಂಡೊಯ್ಯಲು ಫೆಬ್ರವರಿ 5,6,7ರಂದು ಮೂರು ದಿನಗಳ ಕಾಲ ದ.ಕ ಜಿಲ್ಲಾದ್ಯಂತ ವಾಹನ ಪ್ರಚಾರ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. 5ರಂದು ಬೆಳಗ್ಗೆ 9.30ಕ್ಕೆ ನಗರದ ಲೇಡಿಗೋಷನ್ ಬಳಿಯಲ್ಲಿ ಜಾಥಾದ ಉದ್ಘಾಟನಾ ಸಮಾರಂಭವು ಜರುಗಲಿದೆ. ಉದ್ಘಾಟನೆಯನ್ನು ಕರ್ನಾಟಕ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಪ್ರದಾನ ಕಾರ್ಯದರ್ಶಿ ಫಣೀಂದ್ರ ಕೆ.ಯವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಬ್ಯಾಂಕ್ ನೌಕರರ ರಾಜ್ಯ ನಾಯಕರಾದ ವಿನ್ಸೆಂಟ್ ಡಿ.ಸೋಜ ಹಾಗೂ ಬಿ.ಎಂ. ಮಾಧವರವರು ಭಾಗವಹಿಸಲಿದ್ದಾರೆ. ಬಳಿಕ ಜಾಥಾವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಸಂಚರಿಸಿ ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಸಮಾರೋಪಗೊಳ್ಳಲಿದೆ ಎಂದರು .

ವ್ಯಾಪಕ ರಸ್ತೆತಡೆ ಚಳುವಳಿ:

ಅಖಿಲ ಭಾರತ ಮುಷ್ಕರ ನಡೆಯಲಿರುವ ಫೆ. 12ರಂದು ಬೆಳಗ್ಗೆ 9 ಗಂಟೆಗೆ ದ.ಕ. ಜಿಲ್ಲಾದ್ಯಂತ ಏಕಕಾಲದಲ್ಲಿ ತಾಲೂಕು, ವಲಯ ಕೇಂದ್ರಗಳು ಸೇರಿದಂತೆ ಸುಮಾರು 25ಕ್ಕೂ ಮಿಕ್ಕಿದ ಕಡೆಗಳಲ್ಲಿ ರಸ್ತೆತಡೆ ಚಳುವಳಿ ನಡೆಯಲಿದೆ. ನೂರಾರು ಸಂಖ್ಯೆಗಳಲ್ಲಿ ಕಾರ್ಮಿಕರು, ರೈತರು, ವಿದ್ಯಾರ್ಥಿ ಯುವಜನರು, ಮಹಿಳೆಯರು, ದಲಿತ ಆದಿವಾಸಿಗಳು ಸೇರಿದಂತೆ ಜಿಲ್ಲೆಯ ಪ್ರಜ್ಞಾವಂತ ಜನತೆ ರಸ್ತೆತಡೆ ಚಳುವಳಿಯಲ್ಲಿ ಭಾಗವಹಿಸಲಿದ್ದಾರೆ .

ಪತ್ರಿಕಾಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆರಿಂಜ, ಎಐಟಿಯುಸಿ ಜಿಲ್ಲಾ ಮುಖಂಡ ಬಿ. ಶೇಖರ್, ಸಿಐಟಿಯು ಜಿಲ್ಲಾ ನಾಯಕ ಯೋಗಿಶ್ ಜಪ್ಪಿನಮೊಗರು, ಪ್ರಾಂತ ರೈತ ಸಂಘದ ಜಿಲ್ಲಾ ನಾಯಕ ಕೆ. ಯಾದವ ಶೆಟ್ಟಿ, ರೈತ ಸಂಘದ ಓಸ್ವಾಲ್ ಪ್ರಕಾಶ್ ಫೆರ್ನಾಂಡೀಸ್, ಬ್ಯಾಂಕ್ ನೌಕರರ ನಾಯಕ ಬಿ.ಎಂ. ಮಾಧವ ಇತರರು ಇದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!