ಮಂಗಳೂರು: ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಯುವತಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಯುವತಿಯ ಮೃತದೇಹವನ್ನು ತಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಸ್ಥಳೀಯರು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳೂರು ನಗರದ ನಂತೂರು ವೃತ್ತದ ಬಳಿ ಮೊನ್ನೆ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು, ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮೃತ ಯುವತಿ ತನ್ನ ಭಾವೀ ಪತಿಯೊಂದಿಗೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೆಲವೇ ದಿನಗಳಲ್ಲಿ ಯುವತಿಯ ಮದುವೆ ನಿಶ್ಚಯವಾಗಿದ್ದ ಹಿನ್ನೆಲೆಯಲ್ಲಿ, ಈ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ನೋವು ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ನ್ಯಾಯ ದೊರಕಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.