ಮಲೆಯಾಳ ಕಡ್ಡಾಯ ಮಸೂದೆ ವಿರೋಧ: ವಿ.ಡಿ. ಸತೀಶನ್‌ಗೆ ಕಾಸರಗೋಡಿನಲ್ಲಿ ಮನವಿ

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್. ಸುಬ್ಬಯಕಟ್ಟೆ, ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾರ್ಯದರ್ಶಿ ಅಖಿಲೇಶ್ ನಗುಮುಗಮ್ ಮುಂತಾದವರು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!