ರೋಸಾರಿಯೋ ಶಾಲೆಯಲ್ಲಿ ಸ್ಮಾರ್ಟ್ ಕಿಡ್ ಶೋ

ಫೆಬ್ರವರಿ 14ರಂದು ಶಾಲೆಯಲ್ಲಿ ಆಯೋಜಿಸಲಾಗಿದ್ದ “ಸ್ಮಾರ್ಟ್ ಕಿಡ್ ಶೋ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಸಿರಿಲ್ ರೋಸಾರಿಯೋ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆವ್. ಫ್ರಾ. ವ್ಯಾಲೆರಿಯನ್ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೇವಿಸ್ ಸೆರ್ರಾವ್ ಅವರು ಅತಿಥಿಗಳಿಗೆ ಹಾಗೂ ಸಭಿಕರಿಗೆ ಆತ್ಮೀಯ ಸ್ವಾಗತ ಕೋರಿದರು.

ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ರಮ್ಯಾ ಅವರು ಸಮರ್ಥವಾಗಿ ನಿರ್ವಹಿಸಿ, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು.ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಮನಮೋಹಕವಾಗಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಪಡೆದರು. ಮುಖ್ಯ ಅತಿಥಿಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ಶಿಕ್ಷಕಿ ಜ್ಯೋತಿ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮವು ಸಂಭ್ರಮ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!