ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ರವರು ಮಂಗಳೂರು ನಗರದ ಪಂಪ್ವೆಲ್–ಕಂಕನಾಡಿ ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚೆ ನಡೆಸಿದರು.
ಈ ವೇಳೆ ರಸ್ತೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ಸಂಚಾರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಸಾರ್ವಜನಿಕರಿಗೆ ಈ ರಸ್ತೆ ಅತ್ಯಂತ ಮಹತ್ವದ್ದಾಗಿರುವುದರಿಂದ ಯಾವುದೇ ವಿಳಂಬವಿಲ್ಲದೆ, ಉನ್ನತ ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಾಮಗಾರಿಯ ವೇಳೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿ, ಪಾದಚಾರಿಗಳು ಹಾಗೂ ವಾಹನ ಸವಾರರಿಗೆ ತೊಂದರೆ ಆಗದಂತೆ ಅಗತ್ಯ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಅವರು ನಿರ್ದೇಶಿಸಿದರು.