ಅಡ್ಕತ್ತಬೈಲು ಅಗ್ನಿ ಅವಘಡ: ಸಂತ್ರಸ್ತ ಕುಟುಂಬಕ್ಕೆ ಧರ್ಮಸ್ಥಳದಿಂದ ಸಹಾಯಧನ ಮಂಜೂರು

ಕಾಸರಗೋಡು: ಕಾಸರಗೋಡು ಅಡ್ಕತ್ತಬೈಲು ಕ್ಷೇತ್ರದ ಬೀರಂತಬೈಲು ಪ್ರದೇಶದ ಪುಷ್ಪಾ ಗಣಪತಿ ಆಚಾರ್ಯರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಸಂಪೂರ್ಣ ಹಾನಿಯಾಗಿರುವ ಘಟನೆಗೆ ಸಂಬಂಧಿಸಿ ಸಹಾಯಧನ ಕೋರಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ.

ಸಂತ್ರಸ್ತ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕ್ಷೇತ್ರದಿಂದ ಪ್ರಸಾದ ರೂಪದಲ್ಲಿ ಸಹಾಯಧನ ಮಂಜೂರಾತಿ ಮಾಡಲಾಗಿದೆ. ಮಂಜೂರಾತಿ ಪತ್ರವನ್ನು ಸಂಬಂಧಿಸಿದ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ದಿನೇಶ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ನಗರಸಭೆಯ 5ನೇ ವಾರ್ಡ್ ಕೌನ್ಸಿಲರ್ ಹರೀಶ್ ಕೆ.ಆರ್., ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಗೋಪಾಲಕೃಷ್ಣ, ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಸಹಾಯಧನದಿಂದ ಸಂತ್ರಸ್ತ ಕುಟುಂಬಕ್ಕೆ ಸಂಕಷ್ಟದ ಸಮಯದಲ್ಲಿ ಆರ್ಥಿಕ ಬಲ ದೊರಕಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು.

SHARE
Loading spinner

Leave a Reply

Your email address will not be published. Required fields are marked *

error: Content is protected !!