ಕಡಬ: ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿಯಾದ ಸಾಂಜೋ ಸುನಿಲ್ (31) ಅವರು ಐರ್ಲೆಂಡ್ ದೇಶದ ಡಬ್ಲಿನ್ ನಗರದಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದಲ್ಲಿರುವ ತಮ್ಮ ವಾಸಸ್ಥಳದಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಶಯಾಸ್ಪದವಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.
ಐರಿಶ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.ಪತಿಯ ಸಾವಿನ ಸುದ್ದಿ ತಿಳಿದ ತಕ್ಷಣ ಪತ್ನಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಸಾಂಜೋ ಸುನಿಲ್ ಅವರ ಅಕಾಲಿಕ ನಿಧನದಿಂದ ಕಡಬದಲ್ಲಿರುವ ಕುಟುಂಬಕ್ಕೆ ಭಾರೀ ಆಘಾತ ಉಂಟಾಗಿದೆ.