ಗಡಿ ಜಿಲ್ಲೆಯಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ: ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದ ಸುರೇಂದ್ರ

​ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಗಡಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ಪಟ್ಟಿಯಲ್ಲಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರ ಹೆಸರು ಕಾಸರಗೋಡು ಕ್ಷೇತ್ರಕ್ಕೆ ಕೇಳಿಬರುತ್ತಿದ್ದರೆ, ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯುವುದು ಬಹುತೇಕ ಖಚಿತವಾಗಿದೆ.

​ಕಳೆದ ಎರಡು ಚುನಾವಣೆಗಳಲ್ಲಿ ಅತ್ಯಲ್ಪ ಮತಗಳ ಅಂತರದಿಂದ ಗೆಲುವು ಕೈತಪ್ಪಿದ್ದ ಮಂಜೇಶ್ವರವನ್ನು ಈ ಬಾರಿ ಹೇಗಾದರೂ ಮಾಡಿ ವಶಪಡಿಸಿಕೊಳ್ಳಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ. 2016ರಲ್ಲಿ ಕೇವಲ 89 ಮತಗಳ ಅಂತರದ ಹಿನ್ನಡೆ ಅನುಭವಿಸಿದ್ದ ಸುರೇಂದ್ರನ್ ಅವರ ಜನಪ್ರಿಯತೆಯ ಮೇಲೆ ಪಕ್ಷ ಅಪಾರ ವಿಶ್ವಾಸ ಇರಿಸಿದೆ.

​ಇನ್ನೊಂದೆಡೆ, ಯುಡಿಎಫ್ ಪರವಾಗಿ ಹಾಲಿ ಶಾಸಕ ಎ.ಕೆ.ಎಂ. ಅಶ್ರಫ್ ಅವರೇ ಕಣಕ್ಕಿಳಿಯುವ ಸಾಧ್ಯತೆಯಿದೆ. ಎಲ್‌ಡಿಎಫ್ ಪಾಳಯದಲ್ಲಿ ಉದುಮದ ಶಾಸಕ ಸಿ.ಎಚ್. ಕುಂಞಂಬು ಅವರ ಹೆಸರನ್ನು ಮಂಜೇಶ್ವರಕ್ಕೆ ಪರಿಗಣಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಒಟ್ಟಾರೆಯಾಗಿ ಮಂಜೇಶ್ವರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಲಕ್ಷಣಗಳು ದಟ್ಟವಾಗಿವೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!