ವಿಶೇಷ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಲ್ಲೇಶ್ವರದಲ್ಲಿರುವ ಹಿಂದೂ ಸೇವಾ ಪ್ರತಿಷ್ಠಾನದ ಪ್ರಕಲ್ಪವಾದ ಅರುಣ ಚೇತನ ವಿಶೇಷ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ತಮ್ಮ ಹುಟ್ಟುಹಬ್ಬ ವಿಶೇಷವಾಗಿ ಆಚರಿಸಿಕೊಂಡರು.ಈ ವೇಳೆ ಮಾತನಾಡಿದ ಸಚಿವರು, ಅರುಣ ಚೇತನ ವಿಶೇಷ ಸಂಸ್ಥೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಂಸ್ಥೆಯ ಬೆಳವಣಿಗೆಗಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು. ವಿಶೇಷ ಚೇತನ ಮಕ್ಕಳೊಂದಿಗೆ ಕೆಲ ಕಾಲ ಬೆರೆತು, ಮಾತುಕತೆ ನಡೆಸಿದರು. ಅರುಣ ಚೇತನ ವಿಶೇಷ ಸಂಸ್ಥೆ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.

  • ಅಂಗನವಾಡಿ ಮಕ್ಕಳೊಂದಿಗೆ ಕೇಕ್ ಕತ್ತರಿಸಿದ ಸಚಿವರು

ಮಲ್ಲೇಶ್ವರದ 18ನೇ ಕ್ರಾಸ್ ನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಸಚಿವರು ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

  • ಇಲಾಖೆ ಸಿಬ್ಬಂದಿ ವರ್ಗದವರಿಂದ ಸಚಿವರಿಗೆ ಸನ್ಮಾನ
    ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ‌ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ, ಸಮಗ್ರ ಮಕ್ಕಳ ರಕ್ಷಣಾ ಯೋಜನೆ (ಐಸಿಪಿಎಸ್) ಸೇರಿದಂತೆ ಇಲಾಖೆ ವ್ಯಾಪ್ತಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದರು.

ಬಳಿಕ ಬೆಂಗಳೂರಿನ ಸರ್ಕಾರಿ ಗೃಹ ಕಚೇರಿಯಲ್ಲಿ ಸಿಬ್ಬಂದಿ ವರ್ಗದವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು‌.ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮಹಿಳಾ ಅಭಿವೃದ್ಧಿ ನಿಮಗದ ಅಧ್ಯಕ್ಷರಾದ ಜಿ.ಪದ್ಮಾವತಿ, ಇಲಾಖೆಯ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ ಬಾಬು, ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ನಿರ್ದೇಶಕರಾದ ಸ್ನೇಹಾ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಅಶೋಕ್ ಕುಮಾರ್ ಸೇರಿದಂತೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!