ಪುತ್ತೂರು: ಪುತ್ತೂರು ಹಾರಾಡಿ ರೈಲ್ವೇ ಹಳಿಯಲ್ಲಿ ಫೆಬ್ರವರಿ 20ರಂದು ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರು ಹಳಿಯ ಬಳಿ ಶವ ಪತ್ತೆಯಾಗಿರುವುದನ್ನು ಗಮನಿಸಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೇ ಪೊಲೀಸ್ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ.ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.