ಪುತ್ತೂರು: ನೇತ್ರಾವತಿ ನದಿಯಲ್ಲಿ ಗುರುತಿಸಲಾಗದ ಗಂಡಸಿನ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.34 ನೆಕ್ಕಿಲಾಡಿಯ ಮಸೀದಿ ಹಿಂಭಾಗದ ನೇತ್ರಾವತಿ ನದಿಯಲ್ಲಿ ಗಿಡಗಂಟೆಗಳ ನಡುವೆ ಸಿಲುಕಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಸ್ಥಳೀಯರು ಶವವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತದೇಹವು ಮೇಲ್ಭಾಗದ ಪ್ರದೇಶದಿಂದ ತೇಲಿ ಬಂದಿರುವ ಸಾಧ್ಯತೆ ಇರುವುದಾಗಿ ಅನುಮಾನ ವ್ಯಕ್ತವಾಗಿದೆ. ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೃತ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.