ಮಂಗಳೂರು: ಕಬಕ ನಿವಾಸಿ ಹಾಗೂ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.
ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ಮಹಾನಗರಗಳಲ್ಲಿ ಖಾಸಗಿ ಉಪಗ್ರಹ ವಾಹಿನಿಗಳಲ್ಲಿ ಮುಖ್ಯ ಸಂಪಾದಕೀಯ ಹುದ್ದೆಗಳನ್ನು ಅಲಂಕರಿಸಿದ್ದ ಅವರು, ತಮ್ಮ ವೃತ್ತಿಜೀವನದಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದರು.ಅವರು ಅನಾರೋಗ್ಯದ ಹಿನ್ನೆಲೆ ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ಅವರ ನಿಧನ ಸುದ್ದಿ ಪತ್ರಿಕೋದ್ಯಮ ವಲಯದಲ್ಲಿ ಆಳವಾದ ಶೋಕವನ್ನುಂಟು ಮಾಡಿದೆ.