ಬಂಟ್ವಾಳ ಉಪವಿಭಾಗದ ನೂತನ ಎಎಸ್ಪಿ ಯವರನ್ನು ಭೇಟಿ ಮಾಡಿದ SDPI ನಾಯಕರು

ಬಂಟ್ವಾಳ : ಬಂಟ್ವಾಳ ಪೊಲೀಸ್ ಉಪ ವಿಭಾಗಕ್ಕೆ ನೂತನವಾಗಿ ನೇಮಕವಾದ ಐಪಿಎಸ್ ಅಧಿಕಾರಿ ಯಶ್ ಕುಮಾರ್ ಶರ್ಮ ರವರನ್ನು SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ನೇತೃತ್ವದಲ್ಲಿ ಸೌಹಾರ್ದ ಭೇಟಿಯಾಗಿ ಮಾತುಕತೆ ನಡೆಸಿದರು. ಜಿಲ್ಲೆಯಲ್ಲಿ ಶಾಂತಿ ಕಾಪಾಡುವಲ್ಲಿ ಪೊಲೀಸ್ ಇಲಾಖೆ ತೆಗೆದುಕೊಂಡ ದಿಟ್ಟ ಕ್ರಮಗಳ ಬಗ್ಗೆ ಅಭಿನಂದನೆ ಸಲ್ಲಿಸಿದರು.

ಇತ್ತೀಚೆಗೆ ಒಂದು ಧರ್ಮದ ಹೆಸರಿನಲ್ಲಿ ಹಿಂದೂ ರಾಷ್ಟ್ರಸಮಿತಿ ಎಂಬ ದೇಶವಿರೋಧಿ ಕಾರ್ಯಕ್ರಮಗಳು ಬಂಟ್ವಾಳ ಸೇರಿದಂತೆ ಕೆಲವು ಕಡೆ ನಡೆಯುತ್ತಿರುವುದನ್ನು ಸಹಾಯಕ ಪೊಲೀಸ್ ವರಿಷ್ಟಾಧಿಕಾರಿಯವರ ಗಮನಕ್ಕೆ ತಂದು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿ ಆಗ್ರಹಿಸಿದರು. ಈ ಬಗ್ಗೆ ಕಾನೂನು ರೀತಿ ಮುಂದುವರೆಯುವುದಾಗಿ ಉಪ ವಿಭಾಗಾಧಿಕಾರಿ ಭರವಸೆ ನೀಡಿದ್ದಾರೆ. ಎಸ್ ಡಿ ಪಿ ಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬಂಟ್ವಾಳ ವಿಧಾನಸಭಾ ಕ್ಷೇತ್ರಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್, ಕ್ಷೇತ್ರ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!