ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಯಶಸ್ವಿ

ಕುಂಜತ್ತೂರು ಶಿವ ಶಕ್ತಿ ಸೀತಾರಾಮ ಭಜನಾ ಮಂದಿರದಲ್ಲಿ ನಡೆದ ವಾರ್ಷಿಕ ಧಾರ್ಮಿಕ ಕಾರ್ಯಕ್ರಮ ಭಕ್ತಿಭಾವದಿಂದ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮಾಜಿ ಅಧ್ಯಕ್ಷ ಕೆ. ಸುರೇಂದ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಧಾರ್ಮಿಕ ಸಂಪ್ರದಾಯಗಳು ಸಮಾಜದ ಏಕತೆ ಹಾಗೂ ನೈತಿಕ ಮೌಲ್ಯಗಳನ್ನು ಬಲಪಡಿಸುವ ಶಕ್ತಿ ಹೊಂದಿವೆ ಎಂದು ಅವರು ಅಭಿಪ್ರಾಯಪಟ್ಟರು.ಕಾರ್ಯಕ್ರಮದಲ್ಲಿ ವಿಜಯ್ ಕುಮಾರ್ ರೈ, ಆದರ್ಶ ಬಿ.ಎಂ., ಜಯರಾಮ್, ಹರೀಶ್ ಶೆಟ್ಟಿ ಮಾಡ ಸೇರಿದಂತೆ ಹಲವರು ಉಪಸ್ಥಿತರಿದ್ಧರು .ಸ್ಥಳೀಯ ಭಕ್ತರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!