ಬ್ರಹ್ಮರಕೋಟ್ಲು ಬಳಿ ಭೀಕರ ಅಪಘಾತ – ಪಿಕಪ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಬೈಕ್ ಸವಾರನೋರ್ವ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ನರಿಕೊಂಬು ಮರ್ದೊಳಿ ನಿವಾಸಿ ಸಂತೋಷ್ ಎಂಬವರು ಬೈಕ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಅವರು ಬೆಳಿಗ್ಗೆ ಮನೆಯಿಂದ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮರಕೋಟ್ಲು ಎಂಬಲ್ಲಿ ಟಯರ್ ಬ್ಲಾಸ್ಟ್ ಆಗಿದ್ದ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಲಾಗಿದೆ.
ಬಂಟ್ವಾಳ ಟ್ರಾಫಿಕ್ ಎಸ್.ಐ.ಅದರ್ಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!