ವಿಟ್ಲ: ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ: ಹತ್ತನೇ‌ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಯೋರ್ವರ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಡಂಗಾಯಿ ಯಲ್ಲಿ ನಡೆದಿದೆ.ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ10 ನೇ ತರಗತಿಯ ವಿದ್ಯಾರ್ಥಿನಿ, ಬೆಂಗಳೂರು ಮೂಲದ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು.

ವೈಗಲಕ್ಷ್ಮಿ ರವರು ಫೆ.೨೨ರಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿದೆಡೆ ಹುಡುಕಾಟ ನಡೆಸಿದರು ಅವರು ಪತ್ತರಯಾಗಿರಲಿಲ್ಲ. ಇದೀಗ ಫೆ.೨೩ರಂದು ಅಲ್ಲೇ ಪಕ್ಕದಲ್ಲಿರುವ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲ ದ ಮುರಳೀಧರ ರವರ ತಂಡ ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!