ಬಂಟ್ವಾಳ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿದೇಶದಿಂದ ಹಿಂತಿರುಗುತ್ತಿದ್ದಾಗ ವಿಮಾನ ನಿಲ್ದಾಣದಲ್ಲೇ ವಿಟ್ಲ ಪೋಲೀಸರು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಅಕ್ರ 193/2019 ಕಲಂ 427.504.394.341 lpc ಮತ್ತು 2(A)Prevention of Destruction and Loss of Property Act ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು ಎರಡು ವರ್ಷದಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ, ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನನ್ನು, ಫೆ. 24 ರಂದು ವಿದೇಶದಿಂದ ಮರಳಿ ಬರುವಾಗ, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ, ನ್ಯಾಯಾಧೀಶರು ಆರೋಪಿತನಿಗೆ ದಿನಾಂಕ 07.03.2026 ವರೆಗೆ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.