ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನಲೆ ನಿಷೇಧಾಜ್ಞೆ ಜಾರಿ…. !

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-I ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಮಂಗಳೂರು, ಮೂಡಬಿದ್ರೆ, ಉಳ್ಳಾಲ ಮತ್ತು ಮುಲ್ಕಿ ತಾಲೂಕಿನ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್ /ಸೈಬರ್ ಅಂಗಡಿಗಳನ್ನು ಮುಚ್ಚಿಸಲು ಉಪ ಪೊಲೀಸ್ ಆಯುಕ್ತ ಮಿಥುನ್ ಹೆಚ್.ಎನ್ ಆದೇಶಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!