ಹರಿಯಾಣ : ದೇಶಾದ್ಯಂತ ಜನರು ಹೋಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವಾಗ ಹರಿಯಾಣದಲ್ಲಿ ಮದ್ಯದ ಅಮಲಿನಲ್ಲಿದ್ದ ಕೆಲವು ಯುವಕರ ತಂಡವೊಂದು ಮೃಗೀಯ ರೀತಿಯಲ್ಲಿ ವರ್ತಿಸಿದ ಘಟನೆ ನಡೆದಿದೆ, ಗೋಮಾತೆಯ ಬಾಯಿಯನ್ನು ಬಲವಂತವಾಗಿ ತೆರೆದು ಬಲವಂತವಾಗಿ ಮದ್ಯವನ್ನು ಸುರಿಯುತ್ತಿರುವುದು ಕಂಡುಬಂದಿದೆ. ಮದ್ಯದ ನಶೆಯಿಂದ ಹಸು ತತ್ತರಿಸುತ್ತಿದ್ದರೂ ಬಿಡದ ಕಿಡಿಗೇಡಿಗಳು, ಬಳಿಕ ಆ ಹಸುವನ್ನು ಎತ್ತಿನ ಬಂಡಿಗೆ ಕಟ್ಟಿ ಬಲವಂತವಾಗಿ ಓಡಿಸಲು ಯತ್ನಿಸಿದ್ದಾರೆ.
ಅಷ್ಟೇ ಅಲ್ಲದೆ ಗೋವಿಗೆ ಮದ್ಯ ಕುಡಿಸಿದ ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಆ ಹಸುವಿಗೆ ಗಾಡಿಯನ್ನು ಎಳೆಯುವಂತೆ ಒತ್ತಾಯಿಸಲಾಯಿತು .ಕುಡುಕ ಯುವಕರಿಂದ ತುಂಬಿದ್ದ ಬಂಡಿಯನ್ನು ಹಸು ಎಳೆಯುತ್ತದೆ. ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ಅಪ್ಲೋಡ್ ಮಾಡಿದ ಕೆಲವೇ ಗಂಟೆಯೊಳಗೆ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದ್ದು.ಈ ಘಟನೆ ಬಗ್ಗೆ ದೇಶಾದ್ಯಂತ ಜನರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ,ಕೂಡಲೇ ತಪ್ಪಿತಸ್ಥರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ವಿಡಿಯೋದಲ್ಲಿರುವ ವ್ಯಕ್ತಿಗಳ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ‘ಪ್ರಾಣಿ ಹಿಂಸೆ ತಡೆ ಕಾಯ್ದೆ’ಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.