ಮಲ್ಪೆ: ಮಂಜು ಕೊಳಗೆ ಚೂರಿ ಇರಿತ ಪ್ರಕರಣ – ಐವರು ಆರೋಪಿಗಳ ಬಂಧನ

ಉಡುಪಿ: ಹಿಂದೂ ಯುವ ಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಪಲಿಮಾರು ನಿವಾಸಿಗಳಾದ ಪ್ರಜೇಶ್, ಪುನೀತ್, ಅಮೃತ್‌, ಅಭಿಜಿತ್ ಹಾಗೂ ಇನ್ನೋರ್ವ ಆರೋಪಿಯೆಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದಂತೆ ರಾಜಿ ಪಂಚಾಯತಿ ನಡೆಸಲು ಮಂಜು ಕೊಳ ಅವರನ್ನು ಕರೆಸಲಾಗಿತ್ತು ಎನ್ನಲಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ವಾಗ್ವಾದ ಉಂಟಾಗಿ, ಯುವಕನೊಬ್ಬ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ.

ಚೂರಿ ಇರಿತದಿಂದ ಹೊಟ್ಟೆ ಭಾಗಕ್ಕೆ ಗಾಯಗೊಂಡ ಮಂಜು ಕೊಳ ಅವರು ಸ್ಥಳದಲ್ಲೇ ಕುಸಿದಿದ್ದು, ಅವರನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕೃತ್ಯವು ವೈಯಕ್ತಿಕ ಕಾರಣಗಳಿಂದ ನಡೆದಿದ್ದು, ಘಟನೆಗೆ ಯಾವುದೇ ಕೋಮು ಹಿನ್ನೆಲೆ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಅಲ್ಲದೆ, ಯಾರೂ ಸಹ ಈ ಕುರಿತು ವದಂತಿಗಳನ್ನು ಹರಡಬಾರದು ಎಂದು ಅವರು ಮನವಿ ಮಾಡಿದ್ದಾರೆ. ಗಾಯಗೊಂಡಿರುವ ಮಂಜು ಕೊಳ ಅವರು ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!