ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾರ್ಚ್ 5ರಂದು ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಿದ್ದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನ ಕೇಂದ್ರದ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್, ವಿಜಯ ಕರ್ನಾಟಕ ದೈನಿಕದ ಹಿರಿಯ ವರದಿಗಾರರಾದ ವಿಜಯ ಕೋಟ್ಯಾನ್, ಹಿರಿಯ ಸಾಹಿತಿ ಹಾಗೂ ಕಾದಂಬರಿಗಾರರಾದ ಡಾ. ಪ್ರಭಾಕರ ನೀರುಮಾರ್ಗ ಮತ್ತು ತುಳು ಪರಿಷತ್ ಮಂಗಳೂರು ಅಧ್ಯಕ್ಷರಾದ ಶುಭೋದಯ ಆಳ್ವ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.ಲೇಖಕಿ ಸುಧಾ ನಾಗೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಮನ್ವಿತ್ ಶೆಟ್ಟಿ ವಂದಿಸಿದರು.