ಉಪ್ಪಳ: ಕೇರಳ ಅಗ್ನಿಶಾಮಕ ಹಾಗೂ ರಕ್ಷಣಾ ಕೇಂದ್ರದ ಉಪ್ಪಳ ಠಾಣೆಯ ನೂತನ ಆಧುನಿಕ ಕಟ್ಟಡವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆನ್‌ಲೈನ್ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮವು ಶಾಸಕ ಎ.ಕೆ.ಎಂ. ಅಶ್ರಫ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ವೇಳೆ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿದರು.
2024–25ರ ಬಜೆಟ್ ಹಂಚಿಕೆಯಲ್ಲಿ ರೂ. 1.50 ಕೋಟಿ ವೆಚ್ಚದಲ್ಲಿ ಸುಮಾರು 396 ಚದರ ಮೀಟರ್ ವಿಸ್ತೀರ್ಣದಲ್ಲಿ ಈ ಕಟ್ಟಡವನ್ನು ನಿರ್ಮಿಸಲಾಗಿದೆ.ಹಲವಾರು ವರ್ಷಗಳಿಂದ ಅಂಬಾರ್ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಗ್ನಿಶಾಮಕ ಕೇಂದ್ರವು ಇದೀಗ ಸೋಂಕಾಲ್ ಪ್ರತಾಪ್ ನಗರದಲ್ಲಿ ತನ್ನದೇ ಆದ ನೂತನ ಕಟ್ಟಡವನ್ನು ಹೊಂದಿದೆ.
ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಹಾಗೂ ರಕ್ಷಣಾ ಸೇವೆಗಳ ಮಹಾನಿರ್ದೇಶಕರಾದ ನಿತಿನ್ ಅಗರ್ವಾಲ್ ಐಪಿಎಸ್ ಸ್ವಾಗತಿಸಿದರು.ಮಂಜೇಶ್ವರಂ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲಾ ತಂಗಳ್, ಮಂಗಲ್ಪಾಡಿ ಪಂಚಾಯತ್ ಅಧ್ಯಕ್ಷ ಗೋಲ್ಡನ್ ಅಬ್ದುಲ್ ರಹಿಮಾನ್, ಜಿಲ್ಲಾ ಪಂಚಾಯತ್ ಅಭಿವೃದ್ಧಿ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಫಾನಾ ಇಕ್ಬಾಲ್, ಬ್ಲಾಕ್ ಪಂಚಾಯತ್ ಸದಸ್ಯ ಅಝೀಝ್ ಮೆರಿಕೆ ಸೇರಿದಂತೆ ವಯಂತ್ ಮಯ್ಯ, ಶಿಜು ಇ., ರತೀಶ್ ಎಂ.ಆರ್., ವಿಜಯ ರೈ, ಜಯರಾಮ್ ಮತ್ತಿತರರು ಕಾರ್ಯಕ್ರಮದಲ್ಲಿ ಮಾತನಾಡಿದರು.