ಮಂಗಳೂರು: ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ. ಪ್ರದರ್ಶನ ಮಾಡದಂತೆ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿಬಂದಿದೆ.
ಉಚಿತ ಪ್ರದರ್ಶನಕ್ಕಾಗಿ ಮಾಡಿದ್ದ ಬುಕ್ಕಿಂಗ್ ಪೋಸ್ಟರ್‌ನಲ್ಲಿ ಮಹಿಳೆಯರ ಮೊಬೈಲ್ ನಂಬರ್‌ಗಳನ್ನು ಪ್ರಕಟಿಸಲಾಗಿತ್ತು. ಆ ನಂಬರ್‌ಗಳಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ.ಮಹಿಳೆಯರಿಗೆ ನೇರವಾಗಿ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು, ಕೆಲ ಕರೆಗಳು ವಿದೇಶದಿಂದಲೇ ಬಂದಿರುವ ಶಂಕೆ ವ್ಯಕ್ತವಾಗಿದೆ.ಇದಲ್ಲದೆ ಸ್ಥಳೀಯ ಮತಾಂಧ ಶಕ್ತಿಗಳಿಂದಲೂ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಲಾಗಿದೆ.ಈ ಕುರಿತು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪ ಮಾಡಿದ್ದಾರೆ. ಈ ಘಟನೆ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಂತಹ ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ.ಮುಂದೆಯೂ ಜಾಗೃತಿ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.