ಕಾಸರಗೋಡು: ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ 12 ವರ್ಷದ ಬಾಲಕ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಕೊಳ್ನಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಬೂಬಕ್ಕರ್ ಅವರ ಮಗಳು ಅಸ್ಮ ಅವರ ಪುತ್ರ ಆಸೀಪ್ (12) ಮೃತಪಟ್ಟ ಬಾಲಕನಾಗಿದ್ದಾನೆ.
ಮದರಸವೊಂದರಲ್ಲಿ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮನೆಗೆ ಸೈಕಲ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಸೈಕಲ್‌ನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಆಸೀಪ್‌ಗೆ ದೇಹದ ಒಳಭಾಗದಲ್ಲಿ ತೀವ್ರ ಪೆಟ್ಟು ತಗುಲಿದೆಯೆಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಸೀಪ್‌ನ್ನು ತಕ್ಷಣ ಚಿಕಿತ್ಸೆಗಾಗಿ ಮಂಗಳೂರಿನ ತುಂಬೆಯ ಪಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿಯ ವಿದ್ಯಾರ್ಥಿಯಾಗಿದ್ದ ಆಸೀಪ್ ಶಾಲೆಯ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದನು. ಅಜ್ಜನ ಮನೆಯಿಂದ ಶಾಲೆಗೆ ತೆರಳುತ್ತಿದ್ದ ಈ ಬಾಲಕ ತಾಯಿಗೆ ಏಕೈಕ ಮಗನಾಗಿದ್ದಾನೆ. ಆಸೀಪ್‌ನ ಅಕಾಲಿಕ ನಿಧನವು ಕುಟುಂಬದವರನ್ನು ತೀವ್ರ ಆಘಾತಕ್ಕೆ ಗುರಿಮಾಡಿದ್ದು, ಬಂಧುಬಳಗ ಹಾಗೂ ಗ್ರಾಮಸ್ಥರಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ. ಬಾಲಕನ ನಿಧನಕ್ಕೆ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.
Just had a quick look at the 59r platform, and it’s not bad. Quick and simple, and it did what I needed it to. Give it a try yourselves: 59r
Found a version of FreeCine APK with no ads freecine apk sem anúncio. YES! That’s what I needed in my life. Check it here: freecine apk sem anúncio
Alright mates, just downloaded the 888 casino app and gotta say, pretty smooth experience so far. Easy to navigate and loads of games. Fingers crossed for some wins! Check it out yourself: 888 casino app