ಬಿಸಿ ರೋಡ್,ಮಾ.8: ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷೆ ಶಿನೀರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಾಹಿದಾ ತಸ್ನೀಂ ಅವರು, ಪ್ರಸ್ತುತ ಭಾರತದಲ್ಲಿ ಮಹಿಳೆಯರ ಸ್ಥಿತಿಗತಿ ಹಾಗೂ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಹೆಣ್ಣಿನ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸಂಘಟಿತ ಹೋರಾಟದ ಅನಿವಾರ್ಯತೆ ಇದೆ ಎಂದು ಅವರು ಎಚ್ಚರಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬರಕ ಪಿ.ಯು. ಹಾಗೂ ಪದವಿ ಕಾಲೇಜಿನ ಉಪನ್ಯಾಸಕಿ ಡಾ. ನುಶ್ರತ್ ಮಾತನಾಡಿ, ಮಹಿಳಾ ಶಿಕ್ಷಣದ ಅಗತ್ಯತೆ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಹಿಳೆಯರ ಜವಾಬ್ದಾರಿಗಳ ಕುರಿತು ವಿಶ್ಲೇಷಿಸಿದರು.
ಈ ಸಂದರ್ಭದಲ್ಲಿ SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯೆ ಝೀನತ್ ಗೂಡಿನಬಳಿ ಅವರು SIR ಕುರಿತು ಜಾಗೃತಿ ಮೂಡಿಸಿದರು.
ಫಾತಿಮಾ ನುಸೈಬಾ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತ ಕೋರಿದರು. ಝುಬೈದ ಪಾಣೆಮಂಗಳೂರು ಧನ್ಯವಾದ ಸಮರ್ಪಿಸಿದರು. ಜಿಲ್ಲಾ ಸಮಿತಿ ಸದಸ್ಯೆ ಗೌಸಿಯ ಕಾರ್ಯಕ್ರಮವನ್ನು ನಿರೂಪಿಸಿದರು.