ಆದ್ಯಪಾಡಿ : ಧರ್ಮದರ್ಶಿ ಮೋನಪ್ಪ ಮೇಸ್ತ್ರಿ ಇನ್ನಿಲ್ಲ

ಮಂಗಳೂರು : ಇಲ್ಲಿನ ಆದ್ಯಪಾಡಿ ಗ್ರಾಮದ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಳದ ಆಡಳಿತ ಧರ್ಮದರ್ಶಿ ಮೋನಪ್ಪ ಮೇಸ್ತ್ರಿ (70) ಇವರು ಹೃದಯಾಘಾತದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರಿಗೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ಮೃತರು ರೂ 10ಕೋಟಿ ವೆಚ್ಚದಲ್ಲಿ ದೇವಸ್ಥಾನ ಪುನರ್ ನಿರ್ಮಿಸಿ ಬ್ರಹ್ಮಕಲಶ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲ ನೆರವೇರಿಸಿದ್ದರು.

ಮೃತರ ಅಂತ್ಯ ಕ್ರಿಯೆ ಭಾನುವಾರ ಮಧ್ಯಾಹ್ನ ಸ್ವಗೃಹ ಬಳಿ ನೆರವೇರಿತು. ಮೃತರಿಗೆ ಶಾಸಕ ಡಾ. ಭರತ್ ವೈ. ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಮತ್ತಿತರರು ಸಂತಾಪ ವ್ಯಕ್ತಪಡಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!