ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟ ಅರ್ಜುನ್ ಕಪೂರ್ ಭೇಟಿ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಾರಾಧನೆಯ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟ ಅರ್ಜುನ್ ಕಪೂರ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕಳೆದ ಮೂರು ದಿನಗಳಿಂದ ಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದ ಅವರು ವಿವಿಧ ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿದರು. ಶನಿವಾರ ಕ್ಷೇತ್ರಕ್ಕೆ ಆಗಮಿಸಿದ್ದ ಅರ್ಜುನ್ ಕಪೂರ್, ಭಾನುವಾರ ಅತ್ಯಂತ ಫಲದಾಯಕವೆಂದು ನಂಬಲಾದ ‘ಸರ್ಪ ಸಂಸ್ಕಾರ’ ಸೇವೆಯನ್ನು ನೆರವೇರಿಸಿದರು.

ಸೋಮವಾರ ಬೆಳಿಗ್ಗೆ ನಡೆದ ‘ಆಶ್ಲೇಷ ಬಲಿ’ ಪೂಜೆಯಲ್ಲೂ ಅವರು ಭಾಗವಹಿಸಿ ದೇವರ ಕೃಪೆ ಪಡೆದರು. ವೈಯಕ್ತಿಕ ಕಾರಣಗಳು ಹಾಗೂ ಶೀಘ್ರ ವಿವಾಹ ಯೋಗಕ್ಕಾಗಿ (ಕಂಕಣ ಭಾಗ್ಯ) ಈ ವಿಶೇಷ ಸೇವೆಗಳನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೂಜಾ ಕಾರ್ಯಕ್ರಮಗಳ ಬಳಿಕ ಅರ್ಜುನ್ ಕಪೂರ್ ದೇವಾಲಯದ ಆಡಳಿತ ಕಚೇರಿಗೂ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ನಟರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಾಲಯದ ಪಿಆರ್‌ಒ ಜಯರಾಮ್ ರಾವ್, ಮನ್ಮಥ ಬಟ್ಟೋಡಿ ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!