ಮುಂಡೋಳಿ ನಿವಾಸಿ ಕೃಷಿಕ ಬೈಕ್ ಅಪಘಾತದಲ್ಲಿ ದಾರುಣ ಸಾವು

ಉಳ್ಳಾಲ: ಕುತಾರ್ ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಪಾದಚಾರಿಯಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟವರು. ಅವರು ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತ ದಿನೇಶ್ ಗಟ್ಟಿ ಅವರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!