ಮಾರ್ಚ್ 28ರಂದು ಕಾಸರಗೋಡಿನಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ಮತ್ತು ಮಕ್ಕಳ ಕವಿಗೋಷ್ಠಿ

ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳಲ್ಲಿ ಅಡಗಿರುವ ಸಾಹಿತ್ಯ ಪ್ರತಿಭೆಯನ್ನು ಬೆಳಗಿಸಲು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ಹಲವು ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ.

2019ರಲ್ಲಿ ಶಿವರಾಮ ಕಾಸರಗೋಡು ಅವರ ಅಧ್ಯಕ್ಷತೆಯಲ್ಲಿ ಸ್ಥಾಪಿತವಾದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಸೇರಿದಂತೆ ವಿವಿಧ ಕನ್ನಡಪರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತ ಬಂದಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ ಕಾಸರಗೋಡು ಇವರ ಸಹಯೋಗದಲ್ಲಿ ಹಾಗೂ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಕಾರದೊಂದಿಗೆ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ ಮತ್ತು ಮಕ್ಕಳ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು 2026ರ ಮಾರ್ಚ್ 28ರಂದು ಶನಿವಾರ ಅಪರಾಹ್ನ 3.30 ಗಂಟೆಗೆ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಕಾಸರಗೋಡು ಗೋ-ಕುಟೀರದಲ್ಲಿ ನಡೆಯಲಿದೆ.

ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಮತ್ತು ಕಿರಿಯ ಮಕ್ಕಳ ಸಾಹಿತಿಗಳು, ಕವಿ–ಕವಯತ್ರಿಯರು, ಬರಹಗಾರರು ಹಾಗೂ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿ ಕವಿಗಳು ಮತ್ತು ಕಾಲೇಜು ವಿದ್ಯಾರ್ಥಿ ಕವಿಗಳು ತಮ್ಮ ಹೆಸರು, ಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ವಾಟ್ಸ್‌ಆಪ್ ಮೂಲಕ ಕಳುಹಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಭಾಗವಹಿಸುವ ವಿದ್ಯಾರ್ಥಿಗಳಿಗೆ ತಮ್ಮ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಕವಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕನ್ನಡ ಗ್ರಾಮ, ಗ್ರಾಮರಸ್ತೆ, ಕಾಸರಗೋಡು–671121 ಇವರನ್ನು ಮೊಬೈಲ್ ಸಂಖ್ಯೆ 9448572016 ಮೂಲಕ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!