ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಬೆಂಗ್ರೆ ಶಿವಾಜಿ ಆಟೋ ಪಾರ್ಕ್‌ನಲ್ಲಿ ವಿಶೇಷ ಅನುದಾನದಡಿ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿತು. ಈ ಕಾರ್ಯಕ್ರಮವನ್ನು ಶಾಸಕ Vedavyas Kamath ಅವರ ನೇತೃತ್ವದಲ್ಲಿ ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ದಿನನಿತ್ಯ ದುಡಿಯುವ ಆಟೋ ಚಾಲಕರು ಶ್ರಮಿಕ ವರ್ಗಕ್ಕೆ ಸೇರಿದವರಾಗಿದ್ದು, ತಮ್ಮ ಜೀವನೋಪಾಯವಾದ ಆಟೋ ರಿಕ್ಷಾಗಳಿಗೆ ವಿಶೇಷ ಕಾಳಜಿ ವಹಿಸುತ್ತಾರೆ ಎಂದರು. ತಾವು ಬಿಸಿಲಿನಲ್ಲಿ ದುಡಿಯುತ್ತಿದ್ದರೂ, ತಮ್ಮ ವಾಹನಗಳು ನೆರಳಿನಲ್ಲಿ ಇರಬೇಕೆಂಬ ಅವರ ಹಂಬಲದ ಹಿನ್ನೆಲೆಯಲ್ಲಿ ಈ ಮೇಲ್ಛಾವಣಿ ನಿರ್ಮಾಣಕ್ಕೆ ಮುಂದಾಗಲಾಗಿದೆ ಎಂದು ತಿಳಿಸಿದರು. ಈ ಯೋಜನೆ ಪೂರ್ಣಗೊಂಡ ಬಳಿಕ ಚಾಲಕರಿಗೆ ಹೆಚ್ಚು ಸೌಕರ್ಯ ದೊರೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ ಸೇರಿದಂತೆ ಸ್ಥಳೀಯ ಆಟೋ ರಿಕ್ಷಾ ಚಾಲಕರು, ಮಾಲಕರು ಹಾಗೂ ವಾರ್ಡ್‌ನ ಕಾರ್ಯಕರ್ತರು ಉಪಸ್ಥಿತರಿದ್ದರು.