ಕಾಸರಗೋಡಿನಲ್ಲಿ ಮಾರ್ಚ್ 28ರಂದು ಜಿಲ್ಲಾ ಚುಟುಕು ಸಾಹಿತ್ಯೋತ್ಸವ

ಕಾಸರಗೋಡು: ಕನ್ನಡ ಸಾಹಿತ್ಯ ಚಟುವಟಿಕೆಗಳಿಗೆ ಹೆಸರಾದ ಕನ್ನಡ ಗ್ರಾಮದಲ್ಲಿ 2026ರ ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವವನ್ನು ಆಯೋಜಿಸಲಾಗಿದೆ.

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಹಾಗೂ ಕನ್ನಡ ಗ್ರಾಮ ಸಹಯೋಗದಲ್ಲಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.

ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಗೋ-ಕುಟೀರದಲ್ಲಿ ಮಧ್ಯಾಹ್ನ 2.30ರಿಂದ 4 ಗಂಟೆಯವರೆಗೆ ಚುಟುಕು ಸಾಹಿತ್ಯೋತ್ಸವ, ಬಹುಭಾಷಾ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ ಹಾಗೂ ಮಕ್ಕಳ ಕವಿಗೋಷ್ಠಿ ನಡೆಯಲಿದೆ.

ಚುಟುಕು ಸಾಹಿತ್ಯವನ್ನು ಉತ್ತೇಜಿಸುವ ಉದ್ದೇಶದಿಂದ 2000ರಲ್ಲಿ ಸ್ಥಾಪನೆಯಾದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ನಿರಂತರವಾಗಿ ಸಾಹಿತ್ಯ ಮತ್ತು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ. ಈಗಾಗಲೇ ಏಳು ಬಾರಿ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನಗಳ ಜೊತೆಗೆ ಅಖಿಲ ಕರ್ನಾಟಕ ಮಟ್ಟದ ಸಮ್ಮೇಳನವನ್ನೂ ಯಶಸ್ವಿಯಾಗಿ ಆಯೋಜಿಸಿದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಹಾಗೂ ಕಿರಿಯ ಕವಿ-ಕವಯತ್ರಿಯರಿಗೆ ತಮ್ಮ ಚುಟುಕುಗಳು, ಕವನಗಳು ಹಾಗೂ ಮಕ್ಕಳ ಕವನಗಳನ್ನು ವಾಚಿಸಲು ಅವಕಾಶ ನೀಡಲಾಗಿದೆ. ಭಾಗವಹಿಸುವ ಕವಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು.

ಭಾಗವಹಿಸಲು ಆಸಕ್ತರು ತಮ್ಮ ಹೆಸರು, ಪೂರ್ಣ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು ವಾಟ್ಸಪ್ ಮೂಲಕ ಕಳುಹಿಸಬೇಕೆಂದು ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.

SHARE
Loading spinner

3 thoughts on “ಕಾಸರಗೋಡಿನಲ್ಲಿ ಮಾರ್ಚ್ 28ರಂದು ಜಿಲ್ಲಾ ಚುಟುಕು ಸಾಹಿತ್ಯೋತ್ಸವ

Leave a Reply

Your email address will not be published. Required fields are marked *

error: Content is protected !!