ಕಾಸರಗೋಡು: ಮೈಸೂರಿನ ಖ್ಯಾತ ನಟ, ನಾಟಕಕಾರ, ನಿರ್ದೇಶಕ ಹಾಗೂ ರಂಗ ಸಂಘಟಕರಾದ ನಾ . ನಾಗಚಂದ್ರ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ” ಪ್ರದಾನ ಮಾಡಲಾಗುತ್ತಿದೆ.
ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಅಂಡ್ ಲೈಬ್ರರಿ y ಕಾಸರಗೋಡ್ ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ Dr ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಈ ಗೌರವ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಮಾರ್ಚ್ 20, 2026ರ ಶುಕ್ರವಾರ ಕಾಸರಗೋಡಿನ ಸೀತಮ್ಮ ಪುರುಷನಾಯಕ ಮೆಮೋರಿಯಲ್ ಕನ್ನಡ ಭವನ ನಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
40ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ನಾ. ನಾಗಚಂದ್ರ ಅವರು ನಾಟಕ ಅಕಾಡೆಮಿಯ ಮಾಜಿ ಸದಸ್ಯರಾಗಿದ್ದು, ರಂಗಭೂಮಿಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವುದಕ್ಕಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಅವರು, ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅವರ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.