ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ AKM Ashraf ಅವರಿಗೆ ಮಿಂಜಾ ಪಂಚಾಯತ್ ವ್ಯಾಪ್ತಿಯಲ್ಲಿ ಭರ್ಜರಿ ಸ್ವಾಗತ ದೊರೆಯಿತು.
ಅಶ್ರಫ್ ಅವರು ಮಿಂಜಾ ಪಂಚಾಯತ್ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಉತ್ಸಾಹದಿಂದ ಬರಮಾಡಿಕೊಂಡರು. ಮನ್ನಾಥ್ ಅಳುವ ಅಜೀಸ್ ಆಜಿ ಮೇರಿಕೆ , .ಎ.ಕೆ. ಆರಿಫ್ ಸೇರಿದಂತೆ ಹಲವು ಪ್ರಮುಖರು ಅವರೊಂದಿಗೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರೋಡ್‌ಶೋ ಹಾಗೂ ಜನಸಂಪರ್ಕ ಕಾರ್ಯಕ್ರಮವೂ ನಡೆಯಿತು. ಯುಡಿಎಫ್ ಪರ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮನೆಮನೆಗೆ ಭೇಟಿ ನೀಡಿ ಬೆಂಬಲ ಕೋರಲಾಯಿತು. ಸ್ಥಳೀಯ ಸಮಸ್ಯೆಗಳು, ಅಭಿವೃದ್ಧಿ ಯೋಜನೆಗಳು ಹಾಗೂ ಮೂಲಸೌಕರ್ಯಗಳ ಬಗ್ಗೆ ಜನರೊಂದಿಗೆ ಚರ್ಚೆ ನಡೆಸಿದರು.
ಕಾರ್ಯಕ್ರಮದ ವೇಳೆ ಮಾತನಾಡಿದ ಅಶ್ರಫ್, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧತೆಯನ್ನು ವ್ಯಕ್ತಪಡಿಸಿದರು. ಶಿಕ್ಷಣ, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಇನ್ನಷ್ಟು ಬಲಪಡಿಸುವ ಭರವಸೆ ನೀಡಿದರು.
ಸ್ಥಳೀಯರ ಭಾರೀ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದ್ದು, ಮುಂದಿನ ಚುನಾವಣೆಯಲ್ಲಿ ಯುಡಿಎಫ್ ಬಲವನ್ನು ತೋರಿಸುವ ಸೂಚನೆ ನೀಡಿದೆ. ಕೇರಳ ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ತ್ರಿಕೋನ ಸ್ಪರ್ಧೆ ನಡೆಯಲಿರುವ ಮಂಜೇಶ್ವರ ಕ್ಷೇತ್ರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿವೆ.