ತಲೆನೋವಿಗೆ ಔಷಧಿ ಸೇವಿಸಿ 10 ವರ್ಷದ ಬಾಲಕ ಸಾವು: ಕಡಬದಲ್ಲಿ ಪ್ರಕರಣ ದಾಖಲು

ಕಡಬ: ತಲೆನೋವಿನ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಔಷಧಿ ಸೇವಿಸಿದ 10 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕಡಬ ತಾಲೂಕಿನಲ್ಲಿ ವರದಿಯಾಗಿದೆ.

ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ದೂರಿನಂತೆ, ಅವರ 10 ವರ್ಷದ ಮಗನಿಗೆ ಪದೇಪದೇ ತಲೆನೋವು ಕಾಣಿಸಿಕೊಳ್ಳುತ್ತಿತ್ತು. ಮಾರ್ಚ್ 18, 2026 ರಂದು ಸಂಜೆ ತಲೆನೋವಿಗೆಂದು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ ಬಳಿಕ ಬಾಲಕ ಅಸ್ವಸ್ಥಗೊಂಡು ಮನೆಯಲ್ಲಿ ಹೊರಳಾಡುತ್ತಿರುವುದಾಗಿ ಪತ್ನಿ ತಿಳಿಸಿದ್ದಾಳೆ.

ತಕ್ಷಣ ಮನೆಗೆ ಬಂದ ಸಂಜೀವ ಪೂಜಾರಿ ಅವರು ಮಗನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ವೈದ್ಯರು ಪರೀಕ್ಷಿಸಿ ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 10/2026, ಕಲಂ 194 BNSS-2023 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!