ಕಾಸರಗೋಡು: ಕಾಸರಗೋಡು ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ.ಎಲ್. ಅಶ್ವಿನಿ ಅವರು ಮಾರ್ಚ್ 23ರಂದು (ಸೋಮವಾರ) ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.
ಪಕ್ಷದ ಹಿರಿಯ ನಾಯಕರು, ಬಿಜೆಪಿ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಕ್ಷೇತ್ರದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚುನಾವಣಾ ಚಟುವಟಿಕೆಗಳು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ, ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಸಜ್ಜಾಗುತ್ತಿದ್ದಾರೆ.