ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಜನ್ಮ ದಿನಾಚರಣೆ: ಕೆ. ಸುರೇಂದ್ರನ್ ಭಾವನಾತ್ಮಕ ನಮನ

ಕಾಸರಗೋಡು: ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಜನ್ಮ ದಿನದ ಅಂಗವಾಗಿ ಅವರ ನಿವಾಸಕ್ಕೆ ಭೇಟಿ ನೀಡಿ ಪುಷ್ಪಾರ್ಚನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆ. ಸುರೇಂದ್ರನ್ ಅವರು, ರಾಷ್ಟ್ರಕವಿಗಳ ಜನ್ಮನಾಡಿನಲ್ಲಿ ಗಡಿನಾಡ ಕನ್ನಡಿಗರ ಜನ್ಮಸಿದ್ಧ ಹಕ್ಕುಗಳ ಸಂರಕ್ಷಣೆ ತನ್ನ ಮುಖ್ಯ ಗುರಿಯಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಮಂಜೇಶ್ವರ ಗೋವಿಂದ ಪೈ ಅವರ ಸೇವೆಯನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ ಎಂದೂ ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಸ್ಥಳೀಯ ಗಣ್ಯರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದು, ರಾಷ್ಟ್ರಕವಿಗೆ ಗೌರವ ನಮನ ಸಲ್ಲಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!