ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.

ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್, ಡಾ.ಸುಮನ.ಬಿ., ಪಿ.ಬಿ.ಹರೀಶ್ ರೈ ,ಸಚೇತ್ ಸುವರ್ಣ ಮತ್ತು ರಾಘವೇಂದ್ರ ರಾವ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಚೇರ್ಮನ್ ಹಾಗೂ ವಿವಿಧ ಉಪ ಸಮಿತಿಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.
ಸಿಎ ಶಾಂತಾರಾಮ ಶೆಟ್ಟಿ ಅವರು ಸತತ ೪ನೇ ಅವಧಿಗೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಆಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ನವ ದೆಹಲಿಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ನಿರ್ವಹಣಾ ಮಂಡಳಿ ಸದಸ್ಯರಾಗಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!