ಬೆಂಗಳೂರು:ಕರ್ನಾಟಕ ರಾಜ್ಯ ಒಳ ಮೀಸಲಾತಿ (ರಿ.) ವತಿಯಿಂದ ಒಳ ಮೀಸಲಾತಿ ರೋಸ್ಟರ್ಗೆ ವಿರೋಧ ವ್ಯಕ್ತಪಡಿಸಿ ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭೃಹತ್ ಪ್ರತಿಭಟನಾ ಸಮಾವೇಶ ನಡೆಯಿತು.ಈ ಸಂದರ್ಭದಲ್ಲಿ ರಾಜ್ಯದ 101 ಜಾತಿಗಳ ಒಳ ಮೀಸಲಾತಿಯನ್ನು ಖಂಡಿಸಿ, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ವಿವಿಧ ಸಮುದಾಯಗಳ ಪ್ರತಿಭಟನೆ ಜರುಗಿತು.
“ಹಳೆಯ ಮೀಸಲಾತಿಯನ್ನೇ ನಮಗೆ ಮುಂದುವರಿಸಿ, ಹೊಸ ಮೀಸಲಾತಿಯನ್ನು ನಾವು ಸ್ವೀಕರಿಸುವುದಿಲ್ಲ” ಎಂದು ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.ಇದೇ ವೇಳೆ ಬೆಂಗಳೂರು ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ವರೆಗೆ ಪ್ರತಿಭಟನಾಕಾರರು ರಸ್ತೆ ಮೇಲೆ ಮಲಗಿ ಆಕ್ರೋಶ ವ್ಯಕ್ತಪಡಿಸಿದರು