ಅಶ್ರಫ್ ವಿರುದ್ಧ ಸುರೇಂದ್ರನ್ ದೂರು: ಭರತ್ ಶೆಟ್ಟಿ ಕುರಿತು ವಿವಾದಾತ್ಮಕ ಹೇಳಿಕೆ

ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚುತ್ತಿರುವ ನಡುವೆ, ಶಾಸಕ ಹಾಗೂ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ವಿರುದ್ಧ ಎನ್‌ಡಿಎ ಅಭ್ಯರ್ಥಿ ಕೆ ಸುರೇಂದ್ರನ್ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಕರ್ನಾಟಕದ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಪ್ರಚೋದನಕಾರಿ ಹಾಗೂ ಮತೀಯ ವಿಭಜನೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮಂಜೇಶ್ವರ ಕ್ಷೇತ್ರದಲ್ಲಿ ಎನ್‌ಡಿಎ ಪರ ಪ್ರಚಾರಕ್ಕೆ ಆಗಮಿಸಿದ್ದ ಭರತ್ ಶೆಟ್ಟಿ ಕುರಿತು ಈ ಹೇಳಿಕೆ ನೀಡಲಾಗಿದೆ ಎನ್ನಲಾಗಿದೆ.

ಎಕೆಎಂ ಅಶ್ರಫ್ ಯೂಟ್ಯೂಬ್ ಚಾನೆಲ್ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಂಗಳೂರಿನಲ್ಲಿ ನಡೆದ ಕೊಲೆಯೊಂದಕ್ಕೆ ಡಾ.ಭರತ್ ಶೆಟ್ಟಿ ಕಾರಣ ಎಂದು ಸುರೇಂದ್ರನ್ ದೂರಿದ್ದಾರೆ. ಪೊಲೀಸರು ಹತ್ಯೆಯ ತನಿಖೆ ನಡೆಸಿ ನೈಜ ಆರೋಪಿಗಳ ವಿರುದ್ಧ ಕರ್ನಾಟಕದಲ್ಲಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದರು. ಡಾ.ಭರತ್ ಹೇಳಿದ ಘಟನೆಗೂ ಯಾವುದೇ ಸಂಬಂಧವಿಲ್ಲ. ಅಶ್ರಫ್ ಅವರು ಮಂಜೇಶ್ವರದ ಮತದಾರರಲ್ಲಿ ಧರ್ಮದ ಹೆಸರಿನಲ್ಲಿ ಮತೀಯವಾದವನ್ನು ಹುಟ್ಟುಹಾಕಲು ಮಾತನಾಡಿದ್ದಾರೆ ಎಂದು ಕೆ. ಸುರೇಂದ್ರನ್ ದೂರಿನಲ್ಲಿ ತಿಳಿಸಿದ್ದಾರೆ

SHARE
Loading spinner

Leave a Reply

Your email address will not be published. Required fields are marked *

error: Content is protected !!