ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ; ಹೋಟೆಲ್ ಕಾರ್ಮಿಕ ಸಾವು

​ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಹೊಸಂಗಡಿ ಎಕ್ಸಿಟ್ ಪಾಯಿಂಟ್ ಬಳಿ ಗುರುವಾರ ಮಧ್ಯಾಹ್ನ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಉಪ್ಪಳ ನಯಾಬಜಾರ್‌ನ ಯು.ಕೆ. ಫ್ಲಾಟ್ ನಿವಾಸಿ ಇಮಾನುಲ್ಲಾ (19) ಸಾವನ್ನಪ್ಪಿದ ದುರ್ದೈವಿ.ಮೃತ ಯುವಕ ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವನಾಗಿದ್ದು, ಸ್ಥಳೀಯ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಹೊಸಂಗಡಿ ಜಂಕ್ಷನ್ ಬಳಿ ಚಲಿಸುತ್ತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಬೈಕ್ ವೇಗವಾಗಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಮಾನುಲ್ಲಾ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

​ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ಟಿಪ್ಪರ್ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!