ಮಂಗಳೂರಿನಲ್ಲಿ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣ: ಬಳಕೆಯಾದ ಕಾರು ಬುಡೋಳಿಯಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬೆಳ್ಳಂಬೆಳಗ್ಗೆ ನಡೆದ ರೌಡಿಶೀಟರ್ ಆರಿಫ್ ಯಾನೆ ‘ಟ್ಯಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭಿಸಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಪತ್ತೆಯಾಗಿದೆ.

ಹತ್ಯೆ ನಡೆದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬುಡೋಳಿಯಲ್ಲಿ ಶಂಕಾಸ್ಪದವಾಗಿ ನಿಲ್ಲಿಸಿದ್ದ ಕಾರನ್ನು ಪತ್ತೆಹಚ್ಚಿದ್ದಾರೆ. ಈ ಕಾರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ವಿಟ್ಲ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಕಾರಿನ ಪರಿಶೀಲನೆ ಮೂಲಕ ಆರೋಪಿಗಳ ಬಗ್ಗೆ ಹೆಚ್ಚಿನ ಸುಳಿವು ದೊರಕುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಆರಿಫ್ ಅವರನ್ನು ಬೈಕ್‌ನಿಂದ ಕೆಡವಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!